Jan 19, 2014

ಪ್ರತಿಭಾ ಭಾರತೀ - ದಶಂಬರ 2013

"ವಿದ್ಯಾರ್ಥಿಗಳು ತಮ್ಮಜೀವನದಲ್ಲಿ ಉತ್ತಮ ಸಂಸ್ಕಾರವನ್ನು ಅಳವಡಿಸಿಕೊಂಡು ಸಾಧನೆಯತ್ತ ಮನಸ್ಸನ್ನು ಕೇಂದ್ರೀಕರಿಸಬೇಕು. ಧರ್ಮ ಮತ್ತು ಸಂಸ್ಕೃತಿಯನ್ನು ಒಳಗೊಂಡ ಶಿಕ್ಷಣ ವ್ಯವಸ್ಥೆಯು ಭಾರತದ ಉತ್ತಮ ಪ್ರಜೆಗಳಿಗೆ ಮುನ್ನುಡಿಯಾಗಿದೆ. ಇಂತಹ ಬಹುಮುಖಿ ಶಿಕ್ಷಣ ವ್ಯವಸ್ಥೆಯನ್ನು ನೀಡುವ ಶಿಕ್ಷಣ ಸಂಸ್ಥೆಗಳನ್ನು ನಾವು ಪ್ರೋತ್ಸಾಹಿಸಬೇಕು” ಎಂದು ವರ್ಕಾಡಿ ಗ್ರಾಮ ಪಂಚಾಯತು ಮಾಜಿ ಅಧ್ಯಕ್ಷೆ ಜಯಲಕ್ಷ್ಮಿ.ಎಸ್.ಭಟ್ ಬೆದ್ರಡಿ ಕಲ್ಲಕಟ್ಟ ಅಭಿಪ್ರಾಯಪಟ್ಟರು. ಅವರು 20.12.2013 ಶುಕ್ರವಾರ ನಮ್ಮ ವಿದ್ಯಾಪೀಠದಲ್ಲಿ ಜರಗಿದ ದಶಂಬರ ತಿಂಗಳ ‘ಪ್ರತಿಭಾ ಭಾರತೀ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ವಿದ್ಯಾರ್ಥಿ ಮನೀಶ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸುಬ್ರಹ್ಮಣ್ಯ ಭಟ್, ಶಾಲಾ ಸಮಿತಿಯ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ ಮಾರ್ಗ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿನಿ ಮಾನಸ ಗತ ಕಾರ್ಯಕ್ರಮದ ವರದಿಯನ್ನು ಮಂಡಿಸಿದರು.

    ವಿದ್ಯಾರ್ಥಿಗಳಾದ ಸುಮೇಘ ಸ್ವಾಗತಿಸಿ ಸಂಕೇತ ವಂದಿಸಿದರು. ಗೌರೀಶ ವಿಶ್ವಾಮಿತ್ರ ಮತ್ತು ದೀಪಕ್ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment