Jan 12, 2015

ಶ್ರೀ ಭಾರತೀ ವಿದ್ಯಾಪೀಠದ ವರ್ಧಂತ್ಯುತ್ಸವ



“ವಿದ್ಯೆ ಸಂಸ್ಕಾರವನ್ನು ಕೊಡುತ್ತದೆ. ವಿನಯವನ್ನು ಬೆಳೆಸುತ್ತದೆ. ಉತ್ತಮ ಸಮಾಜದ ನಿರ್ಮಾಣಕ್ಕೆ ಪೂರಕವಾದ ಸದ್ಗುಣಗಳನ್ನು ಕಲಿಸುವ ಇಂತಹ ಶಿಕ್ಷಣ ಇಂದಿನ ಸಮಾಜಕ್ಕೆ ಅತೀ ಅಗತ್ಯ. ಸಮಾಜದ ಉಳಿವಿಗೆ ಇದು ಪೂರಕ. ಮುಜುಂಗಾವಿನ ಪರಿಸರದಲ್ಲಿ ವಿದ್ಯಾರ್ಥಿಯ ಬೆಳವಣಿಗೆಗೆ ಅಪಾರ ಸಾಧ್ಯತೆಗಳಿವೆ." ಎಂದು ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೈಲಾಸಮೂರ್ತಿ.ಕೆ ಅಭಿಪ್ರಾಯಪಟ್ಟರು. ಅವರು ಮೊನ್ನೆ 10.01.2014 ಶನಿವಾರ ನಮ್ಮ ಸಂಸ್ಥೆಯಲ್ಲಿ ನಡೆದ ವರ್ಧಂತ್ಯುತ್ಸವದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಮಿತಿಯ ಅಧ್ಯಕ್ಷ ಮದನಗುಳಿ ರಾಮಚಂದ್ರ ಭಟ್ ವಹಿಸಿದ್ದರು. ಅಭ್ಯಾಗತರಾಗಿ ಕುಂಬಳೆ ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಅಶ್ವಿನಿ ನಾಣಿತ್ತಿಲು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ಥಳೀಯ ಯೋಜನಾಧಿಕಾರಿ ಶ್ರೀಮತಿ ಸಂಧ್ಯಾ. ವಿ.ಶೆಟ್ಟಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಭಟ್ ಭಾಗವಹಿಸಿದರು. ಶಾಲಾ ಸಮಿತಿಯ ಜತೆಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.  ಶ್ರೀಭಾರತೀ ವಿದ್ಯಾಪೀಠದ ವರದಿಯನ್ನು ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಭೆ-ಮಾರ್ಗ ವಾಚಿಸಿದರು.
ಶ್ರೀ ಭಾರತೀ ವಿದ್ಯಾಪೀಠದ ವಿದ್ಯಾರ್ಥಿಗಳ ‘ಬೆಳಕು’ ಮತ್ತು ‘ಜ್ಞಾನದೀಪ್ತಿ’ ಹಸ್ತಪ್ರತಿಗಳನ್ನು ಬಿಡುಗಡೆಗೊಳಿಸಲಾಯಿತು. ಶಾಲಾ ವಿದ್ಯಾರ್ಥಿಗಳಾದ ವಿದ್ಯಾಶ್ರೀ ಸ್ವಾಗತಿಸಿ, ಶ್ಯಾಮ ಭಟ್ ದರ್ಭೆ-ಮಾರ್ಗ ವಂದಿಸಿದರು. ವಿದ್ಯಾರ್ಥಿ ವಿಕ್ರಮ್ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ನೃತ್ಯ ವೈವಿಧ್ಯ ಜರಗಿತು.

Jan 8, 2015

ಡಾ| ವೀರೇಂದ್ರ ಹೆಗ್ಗಡೆ ಸಂದರ್ಶನ

ನಮ್ಮ ಸಂಸ್ಥೆಯ ಆವರಣದಲ್ಲಿ ಜರಗಿದ ಕೃಷಿ ಉತ್ಸವದ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ವೀರೇಂದ್ರ ಹೆಗ್ಗಡೆಯವರು ನಮ್ಮ ವಿದ್ಯಾಪೀಠಕ್ಕೆ ಆಗಮಿಸಿ ಶಾಲಾ ಪರಿಸರದ ನವೀಕರಣ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು. ಪ್ರಣಾಮಗಳು...

ಕೊಂಡೆವೂರು ಶ್ರೀ ಭೇಟಿ

ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಇತ್ತೀಚೆಗೆ ಸಂಸ್ಥೆಯಲ್ಲಿ ಜರಗಿದ ಕೃಷಿ ಉತ್ಸವದ ಸಂದರ್ಭ ನಮ್ಮ ವಿದ್ಯಾಪೀಠಕ್ಕೆ ಆಗಮಿಸಿ ಅನುಗ್ರಹಿಸಿದರು. ಪ್ರಣಾಮಗಳು...

ಜನವರಿ 10 ರಂದು ವರ್ಧಂತ್ಯುತ್ಸವ, ಬನ್ನಿ...


ನಮ್ಮ ವಿದ್ಯಾಪೀಠದ ವರ್ಧಂತ್ಯುತ್ಸವವು 10.01.2015 ಶನಿವಾರ ಶಾಲಾ ಪರಿಸರದಲ್ಲಿ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕುಂಬಳೆ ಪುರುಷೋತ್ತಮ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಪರಾಹ್ನ 3.00 ರಿಂದ ಜರಗುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಭಟ್ ಮದನಗುಳಿ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಕುಂಬಳೆ ಗ್ರಾಮ ಪಂಚಾಯತು ಸದಸ್ಯೆ ಅಶ್ವಿನಿ ನಾಣಿತ್ತಿಲು, ಕಾಸರಗೋಡು ನಗರಸಭೆಯ ಮಾಜಿ ಅಧ್ಯಕ್ಷ ಎಸ್.ಜೆ.ಪ್ರಸಾದ್, ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕೈಲಾಸಮೂರ್ತಿ.ಕೆ ಅಭ್ಯಾಗತರಾಗಿ ಆಗಮಿಸಲಿದ್ದಾರೆ. ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ತಾವೂ ಬನ್ನಿ, ತಮ್ಮವರನ್ನೂ ಕರೆತನ್ನಿ...