Aug 1, 2015

‘ಪ್ರತಿಭಾ ಭಾರತೀ’ - ಜುಲೈ 2015


ಮನುಷ್ಯನು ತನ್ನ ಸಾಹಿತ್ಯ ಮತ್ತು ಬುದ್ಧಿವಂತಿಕೆಯ ಪ್ರದರ್ಶನದ ಮೂಲಕ ಇತರ ಪ್ರಾಣಿಗಳಿಗಿಂತ ವಿಭಿನ್ನವಾಗಿದ್ದಾನೆ. ಕಲಾಭಿರುಚಿಯನ್ನು ವ್ಯಕ್ತಪಡಿಸುವ ಮೂಲಕ ಆತ ಪರಿಪೂರ್ಣನಾಗಲು ಪ್ರಯತ್ನಿಸುತ್ತಾನೆ. ಸಂಸ್ಕೃತದಲ್ಲಿರುವ ಸುಭಾಷಿತಗಳು ತಮ್ಮ ಅರ್ಥ ಗಾಂಭೀರ್ಯದ ಮೂಲಕ ಜೀವನದ ಪಾಠಗಳನ್ನು ಹೇಳಿಕೊಡುತ್ತವೆ. ವಿದ್ಯಾರ್ಥಿಗಳು ಅವುಗಳನ್ನು ಅಧ್ಯಯನ ಮಾಡುವ ಮೂಲಕ ಜೀವನದಲ್ಲಿ ಅಳವಡಿಸಿಕೊಳ್ಳಲು ಸಾಧ್ಯವಾಗಬಹುದುಎಂದು ಸಂಸ್ಕೃತ ಶಿಕ್ಷಕ ಡಾ|ಎಸ್.ಸದಾಶಿವ ಭಟ್ ಅಭಿಪ್ರಾಯಪಟ್ಟರು. ಅವರು ನಿನ್ನೆ ನಮ್ಮ ವಿದ್ಯಾಪೀಠದಲ್ಲಿ ಜರಗಿದ ಜುಲೈ ತಿಂಗಳ ಪ್ರತಿಭಾ ಭಾರತೀಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
 
ವಿದ್ಯಾರ್ಥಿ ಸ್ಕಂದ ಮುರಳಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಮಿತಿಯ ಜೊತೆಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆ ಮಾರ್ಗ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಚಿತ್ರಾ ಸರಸ್ವತಿ ಪೆರಡಾನ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿನಿ ದೀಕ್ಷಾ.ಎಸ್ ಹಿಂದಿನ ಕಾರ್ಯಕ್ರಮದ ವರದಿಯನ್ನು ಮಂಡಿಸಿದರು.

    ವಿದ್ಯಾರ್ಥಿಗಳಾದ ಸೃಷ್ಟಿಕ್ ಸ್ವಾಗತಿಸಿ ದೀಕ್ಷಾ ವಂದಿಸಿದರು. ಆದಿತ್ಯ ಮತ್ತು ಸುಧನ್ವ ಕಾರ್ಯಕ್ರಮ ನಿರೂಪಿಸಿದರು.


No comments:

Post a Comment