Apr 1, 2016

‘ಪ್ರತಿಭಾ ಭಾರತೀ’



“ಪ್ರತಿಭಾ ಪ್ರದರ್ಶನದಿಂದ ವಿದ್ಯಾರ್ಥಿಗಳು ಹಿಂಜರಿಯಬಾರದು. ಅಧ್ಯಯನಕ್ಕೆ ಸಹಕಾರಿಯಾಗುವ ಗ್ರಂಥಾಲಯಗಳನ್ನು ಗರಿಷ್ಠ ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ಪ್ರತಿಭೆಯ ಪ್ರಕಟಣೆಗೆ ಅಗತ್ಯವಾದ ತಯಾರಿಗಳನ್ನು ಮಾಡಿಕೊಳ್ಳಬೇಕು. ಪ್ರತಿಭಾ ಪ್ರದರ್ಶನಗಳಲ್ಲಿ ಭಾಗವಹಿಸುವ ಮೂಲಕ ಸಭಾಕಂಪನವನ್ನು ಹೋಗಲಾಡಿಸಿಕೊಳ್ಳಬೇಕು.” ಎಂದು ನಿವೃತ್ತ ಮುಖ್ಯೋಪಾಧ್ಯಾಯ ಅಡ್ಕ ಸುಬ್ರಹ್ಮಣ್ಯ ಭಟ್ ಅಭಿಪ್ರಾಯಪಟ್ಟರು. ಅವರು ನಿನ್ನೆ 31.03.2016 ಗುರುವಾರ ನಮ್ಮ ವಿದ್ಯಾಪೀಠದಲ್ಲಿ ಅಧ್ಯಯನ ವರ್ಷದ ಕೊನೆಯ ’ಪ್ರತಿಭಾ ಭಾರತೀ’ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ಕುಂಬಳೆಯ ದಂತವೈದ್ಯೆ ಡಾ|ಸುಭಾಷಿಣಿ ವಿದ್ಯಾರ್ಥಿಗಳಿಗೆ ದಂತ ಸ್ವಚ್ಚತೆಯ ಅಗತ್ಯ ಮತ್ತು ಶುಶ್ರೂಷೆಯ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿನಿ ಶ್ರಾವ್ಯಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ, ಶಾಲಾ ಸಮಿತಿಯ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆ ಮಾರ್ಗ, ಮುಖ್ಯಶಿಕ್ಷಕಿ ಶ್ರೀಮತಿ ಚಿತ್ರಾಸರಸ್ವತಿ ಪೆರಡಾನ, ಸಂಸ್ಕೃತ ಶಿಕ್ಷಕ ಡಾ|ಎಸ್.ಸದಾಶಿವ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸ್ಕಂದ ಮುರಳಿ ಸ್ವಾಗತಿಸಿ ಆದಿತ್ಯ ವಂದಿಸಿದರು. ಜಯಶ್ರೀ ಮತ್ತು ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

‘ಸ್ಪಂದನ 2016’



“ಸಂಸ್ಕಾರವಂತ ವಿದ್ಯಾಲಯದಲ್ಲಿ ಕಲಿಯುವ ವಿದ್ಯಾರ್ಥಿಗಳು ಭಾಗ್ಯವಂತರು. ಉಳಿದೆಡೆ ದೊರಕದ ಸಂಸ್ಕೃತಿ, ಸಂಪ್ರದಾಯವನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಇಲ್ಲಿ ಹಮ್ಮಿಕೊಳ್ಳುತ್ತಿರುವುದು ಸಂತಸದ ವಿಚಾರ. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಪರೋಪಕಾರ, ಸನ್ನಡತೆ, ಪರಸ್ಪರ ವಿಶ್ವಾಸದ ಭಾವನೆಗಳನ್ನು ಬೆಳೆಸಿಕೊಳ್ಳಬೇಕು. ಸೂಕ್ತ ಸಂದರ್ಭದಲ್ಲಿ ಮಕ್ಕಳಿಗೆ ಬುದ್ಧಿಮಾತುಗಳನ್ನು ಹೇಳದಿದ್ದರೆ ತಾಯಿ ತಂದೆಯರು ಶತ್ರುಗಳಾಗಬಲ್ಲರು. ಆದ್ದರಿಂದ ಸಂಸ್ಕಾರಯುತ ಶಿಕ್ಷಣ ಕಾಲದ ಅಗತ್ಯವಾಗಿದೆ. ಇಲ್ಲಿ ಬೆಳಗಿದ ದೀಪ ಸರ್ವತ್ರ ಪಸರಿಸಲಿ.” ಎಂದು ಮಂಜೇಶ್ವರದ ಶ್ರೀ ಅನಂತೇಶ್ವರ ದೇವಳ ಪ್ರೌಢಶಾಲೆಯ  ನಿವೃತ್ತ ಮುಖ್ಯೋಪಾಧ್ಯಾಯ ಉದಯಶಂಕರ ಭಟ್ ಮುಂಡಕಾನ ಅಭಿಪ್ರಾಯಪಟ್ಟರು. ಅವರು ಮೊನ್ನೆ 30.03.2016 ಬುಧವಾರ ನಮ್ಮ ವಿದ್ಯಾಪೀಠದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ವಿದಾಯ ಸಮಾರಂಭ ’ಸ್ಪಂದನ 2016’ ಕಾರ್ಯಕ್ರಮದಲ್ಲಿ ಜ್ಞಾನದ ಸಂಕೇತವಾಗಿ ಪ್ರಜ್ವಲಿಸುತ್ತಿರುವ ದೀಪವನ್ನು ವಿದ್ಯಾರ್ಥಿಗಳಿಗೆ ನೀಡಿ ಮಾತನಾಡುತ್ತಿದ್ದರು.

ಶಾಲಾ ಸಮಿತಿಯ ಅಧ್ಯಕ್ಷ ಶಂಕರನಾರಾಯಣ ರಾವ್ ಮುನ್ನಿಪ್ಪಾಡಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಳ್ಳೇರಿಯಾ ಮಂಡಲ ವಿದ್ಯಾಪ್ರಧಾನರಾದ ಬಾಲಕೃಷ್ಣ ಶರ್ಮ ಅನಂತಪುರ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ, ಶಾಲಾ ಸಮಿತಿಯ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಕೋಶಾಧಿಕಾರಿ ಕೆ.ವೆಂಕಟ್ರಮಣ ಭಟ್ ಸೂರಂಬೈಲು, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆ ಮಾರ್ಗ, ಮುಖ್ಯಶಿಕ್ಷಕಿ ಶ್ರೀಮತಿ ಚಿತ್ರಾಸರಸ್ವತಿ ಪೆರಡಾನ, ಸಂಸ್ಕೃತ ಶಿಕ್ಷಕ ಡಾ|ಎಸ್.ಸದಾಶಿವ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸೃಷ್ಟಿಕ್ ಸ್ವಾಗತಿಸಿ ಆಶ್ರಿತ್ ವಂದಿಸಿದರು.

ವಿದ್ಯಾಪೀಠಕ್ಕೆ ಮಾಣಿಲ ಶ್ರೀ ಸ್ವಾಮೀಜಿ ಭೇಟಿ


ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು 28.03.2016 ಸೋಮವಾರ ನಮ್ಮ ವಿದ್ಯಾಪೀಠಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಅನುಗ್ರಹಿಸಿದರು. ಈ ಸಂದರ್ಭದಲ್ಲಿ ಶಾಲಾ ಸಮಿತಿಯ ಉಪಾಧ್ಯಕ್ಷ ಶ್ರೀಕೃಷ್ಣಪ್ರಸಾದ್ ಕಾವೇರಿಕಾನ, ಶಾಲಾ ಸಮಿತಿಯ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆ ಮಾರ್ಗ, ಮುಖ್ಯಶಿಕ್ಷಕಿ ಶ್ರೀಮತಿ ಚಿತ್ರಾಸರಸ್ವತಿ ಪೆರಡಾನ ಉಪಸ್ಥಿತರಿದ್ದರು.